ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

  ಕಲಬುರಗಿಯಲ್ಲಿ ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಸಂಬಂಧಿ ಕೊಲೆ...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 03-04-2026

ಕಲಬುರಗಿಯಲ್ಲಿ ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಸಂಬಂಧಿ ಕೊಲೆ...

ಕಲ್ಬುರ್ಗಿ : ಕಲಬುರಗಿಯಲ್ಲಿ ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಸಂಬಂಧಿ, ಉದ್ಯಮಿ ಅನಿಲ್ ರಾಠೋಡ್ ಅವರನ್ನು ಅವರ ಕಚೇರಿಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಹಣಕಾಸಿನ ವೈಷಮ್ಯವೇ ಹತ್ಯೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ನಗರದ ಹೃದಯಭಾಗದಲ್ಲಿರುವ ಪಿ ಆಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್‌ನಲ್ಲಿ ತಡರಾತ್ರಿ ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಅಳಿಯನ ಸಹೋದರ ಅನಿಲ್ ರಾಠೋಡ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆಯು ಕಲಬುರಗಿ ನಗರದಲ್ಲಿ ಭಾರಿ ಆತಂಕ ಮತ್ತು ಸಂಚಲನ ಮೂಡಿಸಿದೆ.ಅನಿಲ್ ರಾಠೋಡ್ ಅವರು ವೆಂಕಟೇಶ್ವರ ಕಾಂಪ್ಲೆಕ್ಸ್‌ನಲ್ಲಿರುವ ತಮ್ಮ ಕಚೇರಿಯಲ್ಲಿದ್ದಾಗ, ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳ ತಂಡ ನೇರವಾಗಿ ಕಚೇರಿ ಒಳಗೆ ನುಗ್ಗಿದೆ. ಯಾವುದೇ ಮುನ್ಸೂಚನೆ ಇಲ್ಲದೆ ಮಾರಕಾಸ್ತ್ರಗಳಿಂದ ಅನಿಲ್ ಅವರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಹಂತಕರು ಅದೇ ಆಟೋದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಮೃತ ಅನಿಲ್ ರಾಠೋಡ್ ಅವರು ರಿಯಲ್ ಎಸ್ಟೇಟ್ ಮತ್ತು ಫೈನಾನ್ಸ್ ವ್ಯವಹಾರದಲ್ಲಿ ಸಕ್ರಿಯರಾಗಿದ್ದರು. ಅವರ ಹತ್ಯೆಗೆ ಹಣಕಾಸಿನ ವಿಚಾರವೇ ಪ್ರಮುಖ ಕಾರಣವಿರಬಹುದು ಎಂದು ಪೊಲೀಸರು ಪ್ರಾಥಮಿಕವಾಗಿ ಶಂಕಿಸಿದ್ದಾರೆ. ವೈಯಕ್ತಿಕ ಅಥವಾ ವ್ಯವಹಾರಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಳಿವುಗಳನ್ನು ಪತ್ತೆ ಹಚ್ಚಲು ಶ್ವಾನ ದಳ ಮತ್ತು ಫಿಂಗರ್ ಪ್ರಿಂಟ್ ತಜ್ಞರ ತಂಡ ಸ್ಥಳದಲ್ಲಿ ತೀವ್ರ ತಪಾಸಣೆ ನಡೆಸಿದೆ. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳು ಆಟೋದಲ್ಲಿ ಬಂದಿದ್ದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿರುವುದರಿಂದ, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಶೀಘ್ರವೇ ಹಂತಕರನ್ನು ಸೆರೆ ಹಿಡಿಯುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+