ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಇಂದಿರಾ ಆಹಾರ ಕಿಟ್ ಅನುಷ್ಠಾನಕ್ಕೆ ವೇಗ: ಸಿಎಂ ಸಿದ್ದರಾಮಯ್ಯ
ವರದಿಗಾರರು : ಶ್ರೀನಿವಾಸ್ ಹೆಚ್ | ಸ್ಥಳ : ತುಮಕೂರು | ದಿನಾಂಕ : 02-12-2025

ಇಂದಿರಾ ಆಹಾರ ಕಿಟ್ ಅನುಷ್ಠಾನಕ್ಕೆ ವೇಗ: ಸಿಎಂ ಸಿದ್ದರಾಮಯ್ಯ

ಇಂದಿರಾ ಆಹಾರ ಕಿಟ್ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಅನ್ನಭಾಗ್ಯ ಯೋಜನೆಯಡಿ ನೀಡುತ್ತಿದ್ದ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಿಗೆ ಇಂದಿರಾ ಆಹಾರ ಕಿಟ್ ವಿತರಿಸಲು ಸಂಪುಟ ಈಗಾಗಲೇ ಅನುಮೋದನೆ ನೀಡಿರುವುದರಿಂದ, ಸಭೆಯಲ್ಲಿ ಅನೇಕ ಪ್ರಮುಖ ಮಾರ್ಗಸೂಚಿಗಳನ್ನು ಸಿಎಂ ನೀಡಿದರು.

ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆ ಅನ್ವಯ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪನ್ನು ಒಳಗೊಂಡ ಕಿಟ್‌ಗಳನ್ನು ನೀಡಲಾಗುತ್ತದೆ. ಪ್ರತಿ ತಿಂಗಳು 1,25,08,262 ಕಿಟ್‌ಗಳ ಅಗತ್ಯವಿದ್ದು, ಇದಕ್ಕಾಗಿ ₹466 ಕೋಟಿ ವೆಚ್ಚವಾಗುವದು ಎಂದು ಅಂದಾಜಿಸಲಾಗಿದೆ. ರಾಜ್ಯದ ಮಾಸಿಕ ಅಗತ್ಯಗಳಲ್ಲಿ 18,628 ಮೆಟ್ರಿಕ್ ಟನ್ ತೊಗರಿ ಬೇಳೆ ಮತ್ತು ತಲಾ 12,419 ಮೆಟ್ರಿಕ್ ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಸೇರಿವೆ.

ಕಿಟ್‌ಗಳಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ತೊಗರಿ ಬೇಳೆ ಹೆಚ್ಚಿನ ಪ್ರಮಾಣದಲ್ಲಿ ಸೇರಿಸಲು ಕ್ರಮ ಕೈಗೊಳ್ಳಬೇಕೆಂದು ಸಿಎಂ ಸೂಚಿಸಿದರು. ಕೇಂದ್ರ ಸರಬರಾಜು ಸಂಸ್ಥೆಗಳಾದ ನಾಫೆಡ್ ಹಾಗೂ ಎನ್ಸಿಸಿಎಫ್ ಮುಖಾಂತರ ಅಥವಾ ಕೆಟಿಪಿಪಿ ನಿಯಮಾವಳಿಗಳಂತೆ ಖರೀದಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ನಿರ್ದೇಶನ ನೀಡಿದರು. ವಿತರಿಸಲಾಗುವ ವಸ್ತುಗಳ ಗುಣಮಟ್ಟದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದೆಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಬಳಕೆದಾರರಿಗೆ ಕಿಟ್‌ಗಳ ವಿತರಣೆ ಪಾರದರ್ಶಕವಾಗಿರಲು ಪ್ರತಿಯೊಂದು ನ್ಯಾಯಬೆಲೆ ಅಂಗಡಿಗಳಲ್ಲಿಯೂ QR ಕೋಡ್ ಸ್ಕ್ಯಾನಿಂಗ್ ವ್ಯವಸ್ಥೆ ಅಳವಡಿಸಲು ಆದೇಶ ನೀಡಲಾಯಿತು. ನಿಗಮದ ಗೋದಾಮು ಹಾಗೂ ಸಗಟು ಮಳಿಗೆಗಳಿಂದ ಕಿಟ್‌ಗಳನ್ನು ಪ್ರತಿಮಾಸದ 10ನೇ ತಾರೀಖಿನೊಳಗೆ ನ್ಯಾಯಬೆಲೆ ಅಂಗಡಿಗಳಿಗೆ ತಲುಪಿಸುವಂತೆ ಸಿಎಂ ಸೂಚಿಸಿದರು.

ಪೌಷ್ಟಿಕತೆ, ಗುಣಮಟ್ಟ ಮತ್ತು ಪಾರದರ್ಶಕತೆಯನ್ನೇ ಕೇಂದ್ರಬಿಂದುವಾಗಿಸಿಕೊಂಡು ಇಂದಿರಾ ಆಹಾರ ಕಿಟ್ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸರ್ಕಾರ ಸಜ್ಜಾಗಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+