ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಶಾಮನೂರು ಶಿವಶಂಕರಪ್ಪ ಸ್ಮೃತಿ ಸ್ಥಳಕ್ಕೆ ಎಚ್.ಡಿ. ಕುಮಾರಸ್ವಾಮಿ ನಮನ
ವರದಿಗಾರರು : ದರ್ಶನ್ ಎಂ ಎನ್ | ಸ್ಥಳ : ದಾವಣಗೆರೆ | ದಿನಾಂಕ : 26-12-2025

ಶಾಮನೂರು ಶಿವಶಂಕರಪ್ಪ ಸ್ಮೃತಿ ಸ್ಥಳಕ್ಕೆ ಎಚ್.ಡಿ. ಕುಮಾರಸ್ವಾಮಿ ನಮನ

ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ದಿವಂಗತ ಡಾಕ್ಟರ್ ಶಾಮನೂರ್ ಶಿವಶಂಕರಪ್ಪ ಅವರ ಸ್ಮೃತಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

ರಾಜ್ಯ ಸರ್ಕಾರವು ಗ್ಯಾರಂಟಿಗಳಿಗೆ ಹಣ ಹೊಂದಿಸಿಕೊಳ್ಳಲು, ಖಾಲಿ ಆಗಿರುವ ಖಜಾನೆಯನ್ನು ಭರ್ತಿ ಮಾಡಿಕೊಳ್ಳಲು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವ ನೆಪದಲ್ಲಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪಿಸಿದರು.

ಮದ್ಯದಂಗಡಿ ಪರವಾನಗಿ ಒಂದಕ್ಕೆ ₹ 1.95 ಕೋಟಿ ದರವನ್ನು ರಾಜ್ಯ ಸರ್ಕಾರ ನಿಗದಿ ಮಾಡಿದೆ. ಇದು ಲೂಟಿನಲ್ಲೇ ಮತ್ತೇನು? ಜನರಿಗೆ ಇನ್ನು ದೊಡ್ಡ ಪ್ರಮಾಣದಲ್ಲಿ ಕುಡಿತದ ಚಟ ಹತ್ತಿಸಲು ಸರ್ಕಾರವೇ ಉತ್ತೇಜನ ನೀಡುತ್ತಿದೆ. ಇದೇ ರೀತಿ ಪ್ರತಿಯೊಂದು ಇಲಾಖೆಯನ್ನು ಲೂಟಿ ಮಾಡುತ್ತಿದೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್‌ಪಿ) ಸೇರಿದಂತೆ ವಿವಿಧ ಯೋಜನೆಗಳ ಹಣ, ಅನುದಾನವನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ರಾಜ್ಯದ ಖಾಜಾನೆಯನ್ನು ಕೊಳ್ಳೆ ಹೊಡೆಯಲಾಗುತ್ತಿದೆ. ಮದ್ಯದಂಗಡಿ ಹರಾಜು ಮೂಲಕ ಸುಳಿಗೆಬಿಡೆಯುವುದು ರಾಜ್ಯ ಸರ್ಕಾರವು ಜನತೆಗೆ ನೀಡುತ್ತಿರುವ ಹೊಸ ವರ್ಷದ ಕೊಡುಗೆ’ ಎಂದು ಎಂದು ಕೇಂದ್ರ ಸಚಿವರು ಲೇವಡಿ ಮಾಡಿದರು.

ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರ ಖಾತೆಗೆ ಜಮಾ ಆಗಬೇಕಾದ ₹5000 ಕೋಟಿ ಎಲ್ಲಿ ಹೋಯಿತು ಎಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈವರೆಗೂ ಜನತೆಗೆ ಮಾಹಿತಿ ಕೊಟ್ಟಿಲ್ಲ. ನನಗೆ ಈ ವಿಷಯವೇ ಗೊತ್ತಿಲ್ಲ ಎಂದು ಸಿಎಂ ಅವರೇ ಹೇಳುತ್ತಾರೆ. ದಾಖಲೆಯ ಬಜೆಟ್ ಗಳನ್ನು ಮಂಡಿಸಿರುವ ಆವರೆಗೆ ತಮ್ಮ ಇಲಾಖೆಯಲ್ಲಿ ಏನು ನಡೆಯುತ್ತಿದೆ? ಹಣ ಏನಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ್ದಾಗಿ ಹೇಳಿಕೊಳ್ಳುವ ಇವರಂತಹ ಆರ್ಥಿಕ ತಜ್ಞರವನ್ನು ಪ್ರಪಂಚದಲ್ಲಿಯೇ ಕಾಣಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವರು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಪಾತಾಳಕ್ಕೆ ಬಿದ್ದಿದೆ. ಕೇವಲ ಗ್ಯಾರಂಟಿ ಅಂತ ಹೇಳಿಕೊಂಡು ಎರಡೂವರೆ ವರ್ಷ ಆಡಳಿತ ನಡೆಸಿದ್ದಾರೆ. ರಾಜ್ಯದ ರಸ್ತೆಗಳನ್ನು ನೋಡಿದರೆ ಇವರ ಆಡಳಿತದ ಹಣೆಬರಹ ಗೊತ್ತಾಗುತ್ತದೆ. ಅಧಿಕಾರ ಹಂಚಿಕೆ ಕಿತ್ತಾಟದಲ್ಲಿಯೇ ಸಿಎಂ, ಡಿಸಿಎಂ ಇಷ್ಟು ದಿನ ಕಾಲಹರಣ ಮಾಡಿದ್ದಾರೆ. ಇವರನ್ನು ಜನರು ಕ್ಷಮಿಸುವುದಿಲ್ಲ ಎಂದು ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದರು

ಶಾಮನೂರು ಶಿವಶಂಕರಪ್ಪ ಅವರಿಗೆ ನಮನ:

ಇದಕ್ಕೂ ಮುನ್ನ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಇತ್ತೀಚಿಗೆ ಅಗಲಿದ ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದರು.

ಬಳಿಕ ಶಾಮನೂರು ಅವರ ನಿವಾಸಕ್ಕೆ ತೆರಳಿ ಅವರ ಪುತ್ರ, ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರೆಲ್ಲರೂ ಹಾಜರಿದ್ದರು. ತದನಂತರ ಕೇಂದ್ರ ಸಚಿವರು ಮಾಜಿ ಶಾಸಕ ಶಿವಶಂಕರ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಮಂತ್ರಿ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡರು, ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಎಂ. ರಮೇಶ್ ಗೌಡ ಮುಂತಾದವರು ಕೇಂದ್ರ ಸಚಿವರ ಜತೆಯಲ್ಲಿದ್ದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+