ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಾಜ್ಯದಲ್ಲಿಂದು ಗುಡುಗು ಸಹಿತ ಆಲಿಕಲ್ಲು ಮಳೆ ಸಾಧ್ಯತೆ !  4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ವರದಿಗಾರರು : Shobha jagadish | ಸ್ಥಳ : Banglore | ದಿನಾಂಕ : 25-04-2026

ರಾಜ್ಯದಲ್ಲಿಂದು ಗುಡುಗು ಸಹಿತ ಆಲಿಕಲ್ಲು ಮಳೆ ಸಾಧ್ಯತೆ ! 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ರಾಜ್ಯದಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಅಲ್ಲಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆಯ ಹಿನ್ನೆಲೆ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಹೀಟ್ ವೇವ್​ನಿಂದ ತಪ್ಪಿಸಿಕೊಳ್ಳಲು ಯಾವೆಲ್ಲಾ ಮುಂಜಾಗೃತಾ ಕ್ರಮ ಕೈಗೊಳ್ಳಬೇಕೆಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಹೆಚ್ಚಾಗಿದ್ದು, ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದೆ. ಇಂದು ಕರಾವಳಿಯಲ್ಲಿ ಉಷ್ಣ ಅಲೆಯ ಆರ್ಭಟವಿರಲಿದ್ದು ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದ್ದು, ಈ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೊತೆಗೆ 30-40 ಕಿ. ಮೀ ವೇಗದಲ್ಲಿ ಗಾಳಿಯೂ ಬೀಸಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ತಾಪಮಾನದಲ್ಲಿ ಏರುಪೇರಾಗುತ್ತಿದ್ದು, ಬಿಸಿಲ ಬೇಗೆಗೆ ಜನರು ತತ್ತರಿಸಿಹೋಗಿದ್ದಾರೆ. ಇಂದು ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೀಟ್​ ವೇವ್ ಅಲರ್ಟ್​ ಘೋಷಿಸಲಾಗಿದೆ. ಅದರ ಜೊತೆಗೆ ಗುಡುಗು ಸಹಿತ ಗಾಳಿ-ಮಳೆಯಾಗುವ ಸಂಭವವೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನದವರೆಗೂ ಕರಾವಳಿಯಲ್ಲಿ ಇದೇ ರೀತಿಯ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+