ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೀದರ್: ಬೀಜ ಮಸೂದೆ 2025 ಮತ್ತು ಕಾರ್ಮಿಕ ಸಂಹಿತೆ ವಿರೋಧಿ ಭಾರೀ ಪ್ರತಿಭಟನೆ
ವರದಿಗಾರರು : ಬಸವರಾಜ ಪೂಜಾರಿ | ಸ್ಥಳ : ಬೀದರ | ದಿನಾಂಕ : 27-11-2025

ಬೀದರ್: ಬೀಜ ಮಸೂದೆ 2025 ಮತ್ತು ಕಾರ್ಮಿಕ ಸಂಹಿತೆ ವಿರೋಧಿ ಭಾರೀ ಪ್ರತಿಭಟನೆ

ಬೀದರ್: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಬೀಜ ಮಸೂದೆ 2025 ಮತ್ತು ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ ರೈತ–ಕಾರ್ಮಿಕ ಸಂಘಟನೆಗಳು ಬುಧವಾರ ಬೀದರ್‌ನಲ್ಲಿ ಭಾರೀ ಪ್ರತಿಭಟನೆ ನಡೆಸಿದವು. ಈ ಪ್ರತಿಭಟನೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಪ್ರತಿಭಟನೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಹಲವಾರು ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ ರಾಷ್ಟ್ರಪತಿ ಹಾಗೂ ಕರ್ನಾಟಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಸಂಘಟನೆಗಳು, ಬೀಜ ಮಸೂದೆ 2025 ಪಾರಂಪರಿಕ ಬೀಜ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದು, ರೈತರನ್ನು ಕಾರ್ಪೋರೇಟ್ ಬೀಜ ಕಂಪನಿಗಳ ಮೇಲೆ ಅವಲಂಬಿತ ಮಾಡುತ್ತದೆ ಎಂದು ಆಕ್ಷೇಪಿಸಿದರು.

ಸಂಘಟನೆಗಳು ಹೊಸ ಆರ್ಥಿಕ ನೀತಿ ಹಾಗೂ ಒಪ್ಪಂದಗಳ ಪರಿಣಾಮವಾಗಿ ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಬಿಕ್ಕಟ್ಟಿಗೆ ಸಿಲುಕಿರುವುದನ್ನು ಗಮನಕ್ಕೆ ತಂದರು. ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕ ವಿರೋಧಿ ಮತ್ತು ಕಂಪನಿ ಮಾಲೀಕರ ಪರವಾಗಿದ್ದು, ಹಿಂದಿನ 29 ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸಿರುವುದು ತೀವ್ರ ವಿರೋಧಕ್ಕಿಳಿಯಿತು. ಸಭೆಯಲ್ಲಿ, ಕೃಷಿ ವಲಯದ ಬಿಕ್ಕಟ್ಟಿನಿಂದ ದೇಶದಲ್ಲಿ ಐದು ಲಕ್ಷಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಉಲ್ಲೇಖಿಸಲಾಯಿತು. ಸಂಘಟನೆಗಳ ಪ್ರಮುಖ ಹಕ್ಕೋತ್ತಾಯಗಳಂತೆ, ಬೀಜ ಮಸೂದೆ 2025 ಅನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಲಾಯಿತು. ಜೊತೆಗೆ, ಕಾರ್ಮಿಕ ವೇತನ ಸಂಹಿತೆ, ಕೈಗಾರಿಕಾ ಸಂಬಂಧ ಸಂಹಿತೆ, ಸಾಮಾಜಿಕ ಭದ್ರತೆ ಸಂಹಿತೆ ಹಾಗೂ ವೃತ್ತಿಪರ ಸುರಕ್ಷತೆ ಸಂಹಿತೆಗಳನ್ನು ರದ್ದುಪಡಿಸಿ ಹಿಂದಿನ 29 ಕಾರ್ಮಿಕ ಕಾಯ್ದೆಗಳನ್ನು ಮರು ಜಾರಿಗೆ ತರಬೇಕೆಂದು ಕೋರಲಾಗಿತ್ತು

ಪ್ರತಿಭಟನೆಯಲ್ಲಿ ಭಾಗವಹಿಸಿದ ಪ್ರಮುಖ ನಾಯಕರು: ಬಾಬುರಾವ್ ಹೊನ್ನಾ, ಮಲ್ಲಿಕಾರ್ಜುನ ಸ್ವಾಮಿ, ನಜೀರ್ ಅಹ್ಮದ್, ಎಂ.ಡಿ. ಖಮರ್ ಪಟೇಲ್, ಶೇಖ್ ನವಾಜ್, ಜೈಶೀಲಕುಮಾರ, ವೀರಶೆಟ್ಟಿ ವಟಂಬೆ, ರಾಮಣ್ಣ ಅಲಮಾಸಪೂರ, ಪ್ರಭು ತಗಣಿಕರ್, ಶ್ರೀಮತಿ ಶೀಲಾ ಸಾಗರ, ಚಾಂದೋಬಾ ಭೋಸ್ಲೆ, ಖದೀರಮಿಯ್ಯಾ, ಶಿವಾಜಿ ಮುಲಾರಿ, ಬಸವರಾಜ ಪಾಟೀಲ್ ಸೇರಿದಂತೆ ಅನೇಕ ರೈತ–ಕಾರ್ಮಿಕ ಸಂಘಟನೆಗಳ ನಾಯಕರು.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+