ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಎಂಎಲ್ಸಿ ಡಿ.ಟಿ. ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡಿ: ಹಾಸನ ಜಿಲ್ಲಾ ಯಾದವ ಸಂಘದ ಆಗ್ರಹ
ವರದಿಗಾರರು : ಕೆ ಜೆ ಸುರೇಶ | ಸ್ಥಳ : ಹಾಸನ | ದಿನಾಂಕ : 01-12-2025

ಎಂಎಲ್ಸಿ ಡಿ.ಟಿ. ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡಿ: ಹಾಸನ ಜಿಲ್ಲಾ ಯಾದವ ಸಂಘದ ಆಗ್ರಹ

ರಾಜ್ಯ ಗೊಲ್ಲ (ಯಾದವ) ಸಮುದಾಯಕ್ಕೆ ರಾಜಕೀಯ ಪ್ರತಿನಿಧಿತ್ವ ಹೆಚ್ಚಿಸಬೇಕೆಂದು ಒತ್ತಾಯಿಸಿ, ಹಾಸನ ಜಿಲ್ಲಾ ಗೊಲ್ಲ (ಯಾದವ) ಸಂಘವು ರಾಜ್ಯಾಧ್ಯಕ್ಷ ಹಾಗೂ ಎಂಎಲ್ಸಿ ಡಿ.ಟಿ. ಶ್ರೀನಿವಾಸ್ ಅವರಿಗೆ ಮುಂದಿನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಸರ್ಕಾರವನ್ನು ಮನವಿ ಮಾಡಿದೆ. ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಹೊನ್ನೇಗೌಡ ಮಾತನಾಡಿ, ರಾಜ್ಯದಲ್ಲಿ ಯಾದವ ಸಮುದಾಯದ ಜನಸಂಖ್ಯೆ 19 ಲಕ್ಷಕ್ಕೂ ಅಧಿಕವಾಗಿದ್ದರೂ ರಾಜಕೀಯವಾಗಿ ಸಮರ್ಪಕ ಪ್ರತಿನಿಧಿತ್ವ ದೊರಕಿಲ್ಲ ಎಂದು ವಿಷಾದಿಸಿದರು.

ಯಾದವ ಸಮುದಾಯದ ದೀಕ್ಷಿತ ನಾಯಕ ದಿ.ಎ. ಕೃಷ್ಣಪ್ಪ ಅವರ ನಂತರ ರಾಜ್ಯ ಸಂಘಟನೆಯ ನೇತೃತ್ವವನ್ನು ಡಿ.ಟಿ. ಶ್ರೀನಿವಾಸ್ ಬಲಿಷ್ಠವಾಗಿ ಮುಂದುವರಿಸಿದ್ದಾರೆ. ತಮ್ಮ ನಾಯಕತ್ವದಲ್ಲಿ ತುಮಕೂರು, ಚಿತ್ರದುರ್ಗ, ಚಿಕ್ಕೋಡಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಾಜ್ಯ ಗೊಲ್ಲ ಸಮಾವೇಶಗಳು ಯಶಸ್ವಿಯಾಗಿ ನಡೆಯಿವೆ,” ಎಂದು ಅವರು ಹೇಳಿದರು. 2024ರ ಆಗ್ನೇಯ ಶಿಕ್ಷಕರ ಕ್ಷೇತ್ರದ ಎಂಎಲ್ಸಿ ಚುನಾವಣೆಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‌ಗೆ ಗೆಲುವು ತಂದುಕೊಟ್ಟವರು ಡಿ.ಟಿ. ಶ್ರೀನಿವಾಸ್ ಎಂಬುದನ್ನು ಅವರು ನೆನಪಿಸಿದರು. “ತಮ್ಮ ಚಾಣಾಕ್ಷ ತಂತ್ರಗಳು, ವಿಶಾಲ ಸಂಘಟನೆ ಮತ್ತು ಚುನಾವಣಾ ಅನುಭವವು ಅವರನ್ನು ಸಚಿವಸ್ಥಾನಕ್ಕೆ ಅರ್ಹರನ್ನಾಗಿ ಮಾಡುತ್ತದೆ,” ಎಂದು ಹೊನ್ನೇಗೌಡ ಅಭಿಪ್ರಾಯ ಪಟ್ಟರು.

ಡಾಕ್ಟರೇಟ್ ಸೇರಿದಂತೆ ಅನೇಕ ಪದವಿಗಳನ್ನು ಪಡೆದಿರುವ ಶ್ರೀನಿವಾಸರು ರಾಜ್ಯದ ಹಿಂದುಳಿದ ಪ್ರವರ್ಗ–1ರ ಜಾತಿಗಳ ಒಕ್ಕೂಟದ ಅಧ್ಯಕ್ಷರಾಗಿ 95ಕ್ಕೂ ಹೆಚ್ಚು ಅತಿಹಿಂದುಳಿದ ಸಮಾಜಗಳನ್ನು ಸಂಘಟಿಸಲು ಶ್ರಮಿಸುತ್ತಿದ್ದಾರೆ. ಇಂತಹ ವ್ಯಕ್ತಿಯನ್ನು ಕಾಂಗ್ರೆಸ್ ಸರ್ಕಾರ ಮಾನ್ಯತೆಯನ್ನು ನೀಡಿ ಸಚಿವ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದರು. “ಗೊಲ್ಲ ಸಮುದಾಯವನ್ನು ಹಲವು ವರ್ಷಗಳಿಂದ ರಾಜಕೀಯವಾಗಿ ಕಡೆಗಣಿಸಲಾಗಿದೆ. ಆದರೆ ಈ ಬಾರಿ ಸರ್ಕಾರವು ನ್ಯಾಯ ಮಾಡಬೇಕೆಂಬ ಆಶೆಯಿದೆ,” ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ನೇತೃತ್ವದ ಕೃಷ್ಣಪ್ಪ, ಗೋವಿಂದರಾಜು, ಕೇಶವೇಗೌಡ, ನರಸಿಂಹಮೂರ್ತಿ ಹಾಗೂ ಇತರರು ಹಾಜರಿದ್ದರು.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+