ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ವಿಶ್ವ ವಿಖ್ಯಾತ  ಬೆಂಗಳೂರು ಕರಗ ಉತ್ಸವಕ್ಕೆ ಕ್ಷಣಗಣನೆ ಶುರು..!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 31-03-2026

ವಿಶ್ವ ವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಕ್ಷಣಗಣನೆ ಶುರು..!

ಬೆಂಗಳೂರು ; ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಸಿಲಿಕಾನ್ ಸಿಟಿ ಸಿಂಗಾರಗೊಂಡಿದ್ದು, ಸಂಭ್ರಮ ಮನೆಮಾಡಿದೆ. ಇಂದು ತಡರಾತ್ರಿ ಹಸಿಕರಗ ನಡೆಯಲಿದ್ದು, ಏಪ್ರಿಲ್ 1ರಂದು ಅದ್ಧೂರಿ ಪೇಟೆ ಕರಗ ಜರುಗಲಿದೆ. ಮೈಸೂರು ದಸರಾ ಮಾದರಿಯ ದೀಪಾಲಂಕಾರ ಈ ಬಾರಿಯ ವಿಶೇಷ. ಆದರೆ, ಕರಗ ದರ್ಶನದ ಹೆಸರಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಣ ವಸೂಲಿ ಮಾಡುತ್ತಿರುವ ವಂಚಕರ ಬಗ್ಗೆ ಧರ್ಮರಾಯ ಸ್ವಾಮಿ ದೇವಸ್ಥಾನದ ಸಮಿತಿ ಭಕ್ತರಿಗೆ ಎಚ್ಚರಿಕೆ ನೀಡಿದೆ. ಬೆಂಗಳೂರು ನಗರದ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಕೌಂಟ್‌ಡೌನ್ ಆರಂಭವಾಗಿದೆ. ಇಂದು ಅಂದರೆ ಮಾರ್ಚ್ 31ರ ತಡರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಸಂಪಂಗಿ ರಾಮನಗರದ ಸಂಪಂಗಿಕೆರೆ ಅಂಗಳದಲ್ಲಿರುವ ಶಕ್ತಿಪೀಠದಲ್ಲಿ ಹಸಿಕರಗ ನಡೆಯಲಿದೆ. ಬಳಿಕ ಏಪ್ರಿಲ್ 1ರ ಚೈತ್ರ ಪೂರ್ಣಿಮೆಯಂದು ಮಧ್ಯರಾತ್ರಿ ಪೇಟೆ ಕರಗ ನಡೆಯಲಿದ್ದು, ಭಕ್ತರಿಗೆ ದರ್ಶನ ದೊರೆಯಲಿದೆ. ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ನಡೆಯುವ ದ್ರೌಪದಿ ದೇವಿಯ ಕರಗ ಶಕ್ತ್ಯೋತ್ಸವವು ಬೆಂಗಳೂರಿನ ಪ್ರಮುಖ ಸಂಪ್ರದಾಯಿಕ ಉತ್ಸವಗಳಲ್ಲಿ ಒಂದಾಗಿದೆ. ಈ ಬಾರಿ ಉತ್ಸವದಲ್ಲಿ ಸುಮಾರು 10 ರಿಂದ 15 ಲಕ್ಷ ಭಕ್ತರು ಭಾಗವಹಿಸಿ ಕರಗದ ದರ್ಶನ ಪಡೆಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇದರ ನಡುವೆಯೇ, ವಿಶ್ವವಿಖ್ಯಾತ ಬೆಂಗಳೂರು ಕರಗದ ಹೆಸರಿನಲ್ಲಿ ಕೆಲ ಕಿಡಿಗೇಡಿಗಳು ಹಣ ಸಂಗ್ರಹಿಸಲು ಮುಂದಾಗಿರುವುದು ಗಮನಕ್ಕೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ 2,500 ರೂಪಾಯಿ ಹಣ ನೀಡಿದರೆ ಕರಗವನ್ನು ಸಂಪೂರ್ಣವಾಗಿ ತೋರಿಸುತ್ತೇವೆ, ಜೊತೆಗೆ ಒಂದು ಹೊತ್ತಿನ ಊಟ ಮತ್ತು ಕರಗದ ಜೊತೆ ಓಡಾಟಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಪೋಸ್ಟ್‌ಗಳನ್ನು ಹಾಕಲಾಗಿದೆ. ಈ ಕುರಿತು ಶ್ರೀ ಧರ್ಮರಾಯ ಸ್ವಾಮಿ ದೇವಾಲಯದ ವ್ಯವಸ್ಥಾಪನ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ದೇವಾಲಯದ ವತಿಯಿಂದ ಕರಗ ಉತ್ಸವಕ್ಕಾಗಿ ಭಕ್ತರಿಂದ ಯಾವುದೇ ರೀತಿಯ ಹಣ ವಸೂಲಿ ಮಾಡುವುದಿಲ್ಲ. ಕೆಲವರು ದುಡ್ಡು ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+